Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:6 - ಕನ್ನಡ ಸತ್ಯವೇದವು J.V. (BSI)

6 ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:6
35 ತಿಳಿವುಗಳ ಹೋಲಿಕೆ  

ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ನಾವು ಮೇರೆದಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹಿಗ್ಗುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿಹೊಂದಿ


ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿಕೊಳ್ಳುವದಕ್ಕಾಗಲಿ ನಮಗೆ ಧೈರ್ಯಸಾಲದು; ಅವರಂತೂ ತಮ್ಮ ತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.


ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು