1 ಕೊರಿಂಥದವರಿಗೆ 5:10 - ಕನ್ನಡ ಸತ್ಯವೇದವು J.V. (BSI)10 ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲುಕೊಳ್ಳುವವರು, ವಿಗ್ರಹಾರಾಧಕರು ಇವರ ಸಹವಾಸವನ್ನು ಬಿಟ್ಟುಬಿಡಬೇಕೆಂದು ನನ್ನ ತಾತ್ಪರ್ಯವಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂದರೆ, ಈ ಲೋಕದಲ್ಲಿರುವ ದುರಾಚಾರಿಗಳು, ಲೋಭಿಗಳು, ಸುಲಿಗೆಗಾರರು, ವಿಗ್ರಹಾರಾಧಕರು - ಇಂಥವರ ಸಹವಾಸವನ್ನು ಬಿಟ್ಟುಬಿಡಬೇಕೆಂಬುದು ನನ್ನ ಮಾತಿನ ಅರ್ಥವಲ್ಲ. ಹಾಗೆ ಮಾಡಿದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ವಿಶ್ವಾಸ್ ನಸಲ್ಯಾಂಚ್ಯಾ ಮದ್ದಿ ಜಿವನ್ ಕರ್‍ತಲ್ಯಾ ತ್ಯಾ ಸಗ್ಳ್ಯಾ ವೆಭಿಚಾರ್ ಕರ್ತಲ್ಯಾಕ್ನಿ, ಹಾಸ್ಬುರ್ಕ್ಯಾಕ್ನಿ, ಲುಟ್‍ತಲ್ಯಾಕ್ನಿ, ನಾ ಹೊಲ್ಯಾರ್ ಮುರ್ತಿಚಿ ಪುಜಾ ಕರ್ತಲ್ಯಾಕ್ನಿ, ತುಮಿ ಸೊಡುನ್ ದಿವ್ಕ್ ಪಾಜೆ ಮನುನ್ ಸಾಂಗಲ್ಲೊ ನ್ಹಯ್; ತಸೆಜಾಲ್ಯಾರ್ ಹೊ ಜಗುಚ್ ಸೊಡುನ್ ಜಾತಲೆ ಪಡಿ ಹೊತ್ತೆ. ಅಧ್ಯಾಯವನ್ನು ನೋಡಿ |