Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:2 - ಕನ್ನಡ ಸತ್ಯವೇದವು J.V. (BSI)

2 ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜಾಲ್ಯಾರ್‌ಬಿ ತುಮಿ ಮೊಟ್ಯಾ ಪಾನಾತುಚ್ ಹಾಸಿ! ತುಮಿ ತ್ಯಾ ವಿಶಯಾತ್ ಬೆಜಾರ್ ಹೊವ್ನ್, ತಸ್ಲೆ ಕಾಮ್ ಕರ್‍ತಲ್ಯಾಕ್ ತುಮ್ಚ್ಯಾತ್ನಾ ಭಾಯ್ರ್ ಘಾಲುಚೆ ಹೊತ್ತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:2
16 ತಿಳಿವುಗಳ ಹೋಲಿಕೆ  

ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಇಸ್ರಾಯೇಲ್ಯರ ವರ್ಗಸಮೂಹದವರು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಅಳುತ್ತಿರುವಾಗ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನು ಮೋಶೆಗೂ ಸರ್ವಸಮೂಹದವರಿಗೂ ಎದುರಾಗಿಯೇ ಒಬ್ಬ ವಿುದ್ಯಾನ್ ಸ್ತ್ರೀಯನ್ನು ತನ್ನ ಕುಲದವರ ಬಳಿಗೆ ಕರಕೊಂಡು ಬರುವದನ್ನು ಕಂಡರು.


ನಿಮ್ಮಲ್ಲಿ ಕೆಲವರು - ಪೌಲನು ನಮ್ಮ ಬಳಿಗೆ ಬರುವದಿಲ್ಲವೆಂದು ಉಬ್ಬಿಕೊಂಡಿದ್ದಾರೆ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು