Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:3 - ಕನ್ನಡ ಸತ್ಯವೇದವು J.V. (BSI)

3 ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ದೇಹ ನಿಮ್ಮೊಂದಿಗೆ ಇಲ್ಲದಿದ್ದರೂ ನಾನು ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಆ ಪಾಪ ಮಾಡಿದ ವ್ಯಕ್ತಿಗೆ ನಾನು ಆಗಲೇ ತೀರ್ಪು ಮಾಡಿದ್ದೇನೆ. ನಾನು ಅಲ್ಲಿದ್ದಿದ್ದರೆ ಯಾವ ತೀರ್ಪನ್ನು ಕೊಡುತ್ತಿದ್ದೆನೋ ಅದೇ ತೀರ್ಪನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಆಂಗಾನ್ ತುಮ್ಚ್ಯಾ ವಾಂಗ್ಡಾ ನಾ ಜಾಲ್ಯಾರ್ಬಿ ಆತ್ಮ್ಯಾನ್ ತುಮ್ಚ್ಯಾ ಮದ್ದಿ ಹಾಜರ್ ಹಾಂವ್ ಮನುನ್ ಚಿಂತಾ, ತಸೆ ಹಾಜರ್ ರ್‍ಹಾವ್ನ್; ಅಸ್ಲಿ ಕಾಮಾ ಕರ್‍ತಲ್ಯಾಂಚ್ಯಾ ವೈರ್ ಮಿಯಾ ನಿರ್ನಯ್ ದಿವ್ನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:3
6 ತಿಳಿವುಗಳ ಹೋಲಿಕೆ  

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.


ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.


ಅಂಥವರು - ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳುಕೊಳ್ಳಲಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಹೊರಗಿನವರನ್ನು ಕುರಿತು ತೀರ್ಪುಮಾಡುವದಕ್ಕೆ ನನಗೇನಧಿಕಾರ? ಒಳಗಿನವರನ್ನು ಕುರಿತು ತೀರ್ಪುಮಾಡುವವರು ನೀವು ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು