Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:4 - ಕನ್ನಡ ಸತ್ಯವೇದವು J.V. (BSI)

4 ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಸ್ಲಿ ಕಾಮಾ ಕರ್‍ತಲ್ಯಾಂಚ್ಯಾ ವೈರ್ ಅಶೆ ತುಮಿ ಎಕಾಕ್ಡೆ ಗೊಳಾ ಹೊತಾನಾ, ಆತ್ಮಿಕ್ ರಿತಿನ್ ಮಿಯಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾತಾ ಅನಿ ಅಮ್ಚ್ಯಾ ಧನಿಯಾ ಜೆಜುಚೊ ಬಳ್‍ಬಿ ಥೈ ಹಾಜರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:4
18 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.


ಸಹೋದರರೇ, ನವ್ಮಿುಂದ ಹೊಂದಿದ ಬೋಧನೆಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.


ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದ ಜನರಿಂದುಂಟಾದ ಆ ಶಿಕ್ಷೆಯೇ ಸಾಕು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು