1 ಕೊರಿಂಥದವರಿಗೆ 5:5 - ಕನ್ನಡ ಸತ್ಯವೇದವು J.V. (BSI)5 ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರಭಾವವು ನಾಶವಾಗಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ಮಾನ್ಸಾಕ್ ಅಮಿ ಸೈತಾನಾಚ್ಯಾ ಹಾತಿಕ್ ದಿವ್ಕ್ ಪಾಜೆ, ಅಶೆ ತೆಚೊ ಆಂಗಾಚೊ ಸ್ವಬಾವ್ ನಾಸ್ ಹೊವ್ನ್ ಜಾಂವ್ದಿತ್, ಅಶೆ ತೆಚೊ ಆತ್ಮೊ ಧನಿಯಾಚ್ಯಾ ದಿಸಿ ಬಚಾವ್ ಹೊವ್ನ್ ರ್‍ಹಾವ್ಕ್ ಪಾಜೆ. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.