Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:10 - ಕನ್ನಡ ಸತ್ಯವೇದವು J.V. (BSI)

10 ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಚೊರಾ, ಖುದ್ಗೆ, ಫಿದೊಡೆ, ದುಸ್ರ್ಯಾಚೆ ನಾವ್ ವೈಟ್ ಕರ್ತಲೆ , ಲುಟ್ತಲೊ, ಅಸ್ಲೆ ಕೊನ್‍ಬಿ ದೆವಾಚೊ ರಾಜ್ ಜೊಡುಕ್ ಸಕಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:10
19 ತಿಳಿವುಗಳ ಹೋಲಿಕೆ  

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಇಗೋ, ನೀನು ದೋಚಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈಬಡಿದುಕೊಂಡಿದ್ದೇನೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು