Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:13 - ಕನ್ನಡ ಸತ್ಯವೇದವು J.V. (BSI)

13 ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಖಾನ್ ಪೊಟಾಸಾಟ್ನಿ ಅನಿ ಪೊಟ್ ಖಾನಾಸಾಟ್ನಿ” ಮನ್ತಲೆ ಖರೆ ಹಾಯ್: ಹೆ ಅನಿ ತೆ ದೊನಿಬಿ ದೆವ್ ಎಕ್ ದಿಸ್ ನಾಪತ್ತೊ ಕರ್‍ತಾ. ಆಂಗ್ ವೆಭಿಚಾರಾಸಾಟ್ನಿ ನ್ಹಯ್, ತೆ ಧನಿಯಾಸಾಟ್ನಿ ಅನಿ ಧನಿ ಆಂಗಾಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:13
20 ತಿಳಿವುಗಳ ಹೋಲಿಕೆ  

ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು.


ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.


ಬಾಯೊಳಕ್ಕೆ ಹೋಗುವಂಥದು ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ನಿಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತುಹೋದರು;


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುವದರಿಂದ ಅವನನ್ನು ಹೊಲೆಮಾಡಲಾರದೆಂದು ನಿಮಗೆ ತಿಳಿಯಲಿಲ್ಲವೋ ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ತಿನ್ನುವ ಪದಾರ್ಥಗಳೆಲ್ಲಾ ಶುದ್ಧವೆಂದು ಸೂಚಿಸಿದನು.


ಮನುಷ್ಯನನ್ನು ಕೆಡಿಸುವಂಥವುಗಳು ಇವೇ; ಆದರೆ ಕೈತೊಳಕೊಳ್ಳದೆ ಊಟಮಾಡುವದು ಮನುಷ್ಯನನ್ನು ಕೆಡಿಸುವದಿಲ್ಲ ಅಂದನು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು