Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:15 - ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಚಿ ಆಂಗಾ ಕ್ರಿಸ್ತಾಚ್ಯಾ ಆಂಗಾಚಿ ಭಾಗಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತಸೆ ಹೊಲ್ಯಾರ್ ಕ್ರಿಸ್ತಾಚ್ಯಾ ಅಂಗಾಚಿ ಭಾಗಾ ಘೆವ್ನ್ ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಚಿ ಭಾಗಾ ಕರುಕ್ ಹೊತಾ ಕಾಯ್? ಬಿಲ್ಕುಲ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:15
25 ತಿಳಿವುಗಳ ಹೋಲಿಕೆ  

ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ಆದರೂ ಒಂದು ಸಂಗತಿಯನ್ನು ನೀವು ತಿಳಿಯಬೇಕೆಂದು ನನ್ನ ಇಷ್ಟ; ಅದೇನಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆ ಆಗಿದ್ದಾನೆ.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.


ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.


ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.


ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ, ಆಶಿಸಬಾರದೆಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯುತ್ತಿದ್ದಿಲ್ಲ.


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ?


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.


ದೇವರು ಅನ್ಯಾಯಸ್ಥನಾಗಿದ್ದರೆ ಲೋಕಕ್ಕೆ ಹೇಗೆ ನ್ಯಾಯತೀರಿಸಾನು?


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ?


ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು