1 ಕೊರಿಂಥದವರಿಗೆ 6:5 - ಕನ್ನಡ ಸತ್ಯವೇದವು J.V. (BSI)5 ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತುಮ್ಕಾ ಲಜ್ಜ್ಯಾ ಕರುಚಿ! ಖರೆಚ್‌ಬಿ ಭಾವ್ ಭಾವಾಂಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುನ್ ದಿತಲೊ ಎಕ್ಲೊಬಿ ಬುದ್ವಂತ್ ಮಾನುಸ್ ತುಮ್ಚ್ಯಾ ಮದ್ದಿ ನಾ ಕಾಯ್? ಅಧ್ಯಾಯವನ್ನು ನೋಡಿ |