Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:9 - ಕನ್ನಡ ಸತ್ಯವೇದವು J.V. (BSI)

9 ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನ್ನ್ಯಾಯ್ ಕರ್‍ತಲೆ ಕೊನ್‍ಬಿ ದೆವಾಚೆ ರಾಜ್ ಜೊಡುಕ್ ಪಾವಿನಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಮೊಸಾತ್ ಪಡುನಕಾಸಿ ಅನೈತಿಕ್ ಸಮಂದ್ ಕರ್‍ತಲೆ, ಮುರ್ತಿ ತುಜ್ಯಾ ಕರ್‍ತಲೆ, ವೆಭಿಚಾರ್ ಕರ್‍ತಲೆ, ಸಲಿಂಗ್‍ಗಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:9
51 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಿದರೆ ಅವರಿಬ್ಬರೂ ಹೇಸಿಗೆಯ ಕೆಲಸವನ್ನು ಮಾಡಿದದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಬಾರದು; ಅದು ಹೇಸಿಗೆಯಾದ ಕೆಲಸ.


ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲುಕೊಳ್ಳುವವರು, ವಿಗ್ರಹಾರಾಧಕರು ಇವರ ಸಹವಾಸವನ್ನು ಬಿಟ್ಟುಬಿಡಬೇಕೆಂದು ನನ್ನ ತಾತ್ಪರ್ಯವಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾಗುವದು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಸ್ತ್ರೀಯು ಪುರುಷವೇಷವನ್ನೂ ಪುರುಷನು ಸ್ತ್ರೀವೇಷವನ್ನೂ ಹಾಕಿಕೊಳ್ಳಕೂಡದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಹೇಯರು.


ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ಇಸ್ರಾಯೇಲ್ಯರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಗುದಮೈಥುನಿಯಾಗಬಾರದು.


ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಪರಸ್ತ್ರೀಗಮನದಿಂದ ಅಪರಿಶುದ್ಧರಾಗಬಾರದು.


ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.


ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ, ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರಗಾಗಿವೆ, ಆದರೆ ಜಾರತ್ವ ಮಾಡುವವನು ತನ್ನ ದೇಹಕ್ಕೆ ಹಾನಿಕರವಾದ ಪಾಪವನ್ನು ಮಾಡುತ್ತಾನೆ.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಮೋಸಹೋಗಬೇಡಿರಿ; ದೇವರು ತಿರಸ್ಕಾರ ಸಹಿಸುವವನಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು