Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:13 - ಕನ್ನಡ ಸತ್ಯವೇದವು J.V. (BSI)

13 ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಒಗತನ ಮಾಡುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಾಗೆಯೇ ಒಬ್ಬ ಕ್ರೈಸ್ತ ಸಹೋದರಿಗೆ ಕ್ರೈಸ್ತವಿಶ್ವಾಸಿಯಲ್ಲದ ಪತಿ ಇದ್ದು ಅವನು ಆಕೆಯೊಂದಿಗೆ ದಾಂಪತ್ಯಜೀವನ ನಡೆಸಲು ಒಪ್ಪಿದರೆ, ಆಕೆ ಅವನನ್ನು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಒಬ್ಬ ಸ್ತ್ರೀಗೆ ಅವಿಶ್ವಾಸಿಯಾದ ಗಂಡನಿರಲಾಗಿ ಅವನು ಆಕೆಯೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಆಕೆಯು ಅವನನ್ನು ಬಿಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ರ್‍ಹಾಲ್ಯಾರ್ ಅನಿ ತಿಚ್ಯಾ ವಾಂಗ್ಡಾ ಜಿವನ್ ಕರುಕ್ ತೊ ತಯಾರ್ ಹಾಯ್ ತರ್ ತಿನಿ ತೆಕಾ ಸೊಡ್ ಪತ್ತರ್ ದಿವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:13
3 ತಿಳಿವುಗಳ ಹೋಲಿಕೆ  

ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು.


ವಿುಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನನ್ನ ಅಭಿಪ್ರಾಯವೇನಂದರೆ - ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಒಗತನಮಾಡುವದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು