1 ಕೊರಿಂಥದವರಿಗೆ 7:17 - ಕನ್ನಡ ಸತ್ಯವೇದವು J.V. (BSI)17 ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹರಿ ಎಕ್ಲೊ ದೆವಾನ್ ತುಮ್ಕಾ ದಿಲ್ಲ್ಯಾ ದೆನ್ಗಿತ್ ಮಟ್ಲ್ಯಾರ್ ದೆವಾನ್ ತೆಕಾ ಬಲ್ವಲ್ಲ್ಯಾ ತನ್ನಾ ಕಸೊ ಹಾಯ್ ತ್ಯಾಚ್ ಸ್ಥಿತಿತ್ ಜಿವನ್ ಕರುಕ್ ಬಗುಂದಿತ್, ಹಿಚ್ ಚಾಲ್ ಮಿಯಾ ಸಗ್ಳ್ಯಾ ದೆವಾಚ್ಯಾ ತಾಂಡ್ಯಾಕ್ನಿ ಶಿಕ್ವುತಾ. ಅಧ್ಯಾಯವನ್ನು ನೋಡಿ |