Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:19 - ಕನ್ನಡ ಸತ್ಯವೇದವು J.V. (BSI)

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸುನ್ನತ್ ಕರುನ್ ನಾ ಹೊಲ್ಯಾರ್ ಕರಿನಸ್ತಾನಾ ರ್‍ಹಾತಲೆ ಮುಖ್ಯ್ ನ್ಹಯ್ ದೆವಾಚೆ ಖಾಯ್ದೆ ಪಾಳ್ತಲೆ ಮುಖ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:19
16 ತಿಳಿವುಗಳ ಹೋಲಿಕೆ  

ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು