Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:25 - ಕನ್ನಡ ಸತ್ಯವೇದವು J.V. (BSI)

25 ಕನ್ನಿಕೆಯರನ್ನು ಕುರಿತು ಕರ್ತನಿಂದ ಬಂದ ಆಜ್ಞೆ ನನಗೆ ಯಾವದೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಲಗಿನ್ ಹೊಯ್ನಸಲ್ಲ್ಯಾಂಚ್ಯಾ ವಿಶಯಾತ್ ಸಾಂಗುಚೆ ಜಾಲ್ಯಾರ್, ತೆಂಚ್ಯಾ ವಿಶಯಾತ್ ಧನಿಯಾಕ್ನಾ ಮಾಕಾ ಕಸ್ಲೊಬಿ ಖಾಯ್ದೊ ಗಾವುಕ್ ನಾ. ಖರೆ ಮಾಕಾ ಧನಿಯಾಚಿ ದಯಾ ಗಾವಲ್ಲ್ಯಾ ವೈನಾ ಮಿಯಾ ವಿಶ್ವಾಸಾಕ್ ಯೊಗ್ಯ್ ಮನುನ್ ಚಿಂತುನ್. ಮಾಜೊ ಅಭಿಪ್ರಾಯ್ ಮಿಯಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:25
15 ತಿಳಿವುಗಳ ಹೋಲಿಕೆ  

ಹೀಗೆ ಮಾಡಬಹುದೆಂದು ಹೇಳುವದು ಹಿತೋಪದೇಶವೇ ಹೊರತು ಆಜ್ಞೆಯಲ್ಲ.


ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ.


ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.


ವಿುಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನನ್ನ ಅಭಿಪ್ರಾಯವೇನಂದರೆ - ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಒಗತನಮಾಡುವದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.


ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವನಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಅದರಂತೆ ಮುತ್ತೈದೆಗೂ ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಿಲ್ಲದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ;


ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.


ಮದುವೆಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆಯು ಏನಂದರೆ - ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು;


ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರಿಗೆ ಶೋಭನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು