Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:30 - ಕನ್ನಡ ಸತ್ಯವೇದವು J.V. (BSI)

30 ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಕೊಂಡದ್ದು ತಮ್ಮದೇ ಎಂದು ಹೇಳದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ರಡ್ತಲ್ಯಾನಿ ರಡಿನಸಲ್ಲ್ಯಾಂಚ್ಯಾ ಸಾರ್ಕೆ, ಮಜ್ಯಾ ಕರ್ತಲ್ಯಾನಿ ಮಜ್ಯಾ ಕರಿನಸಲ್ಲ್ಯಾಂಚ್ಯಾ ಸಾರ್ಕೆ ಅನಿ ಇಕಾತ್ ಘೆಟಲ್ಲ್ಯಾನಿ ಅಪ್ನಾಕ್ಡೆ ಕಾಯ್ಬಿ ನಾ ಸಾರ್ಕೆ ಜಿವನ್ ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:30
14 ತಿಳಿವುಗಳ ಹೋಲಿಕೆ  

ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.


ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು