Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:35 - ಕನ್ನಡ ಸತ್ಯವೇದವು J.V. (BSI)

35 ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ. ನಾನು ನಿಮಗೆ ಉರ್ಲು ಹಾಕಬೇಕೆಂದು ಇದನ್ನು ಹೇಳುವದಿಲ್ಲ, ನೀವು ಸಜ್ಜನರಿಗೆ ತಕ್ಕ ಹಾಗೆ ನಡೆದು ಭಿನ್ನಭಾವವಿಲ್ಲದೆ ಕರ್ತನಿಗೆ ಪಾದಸೇವೆಯನ್ನು ಮಾಡುವವರಾಗಬೇಕೆಂದು ನಿಮ್ಮ ಹಿತಕ್ಕೋಸ್ಕರವೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತುಮ್ಚ್ಯಾಚ್ ಬರ್‍ಯಾಕ್ ಮನುನ್ ಮಿಯಾ ಹೆ ಸಾಂಗ್ತಾ ತುಮ್ಕಾ ದಡ್ಪುನ್ ಧರುಚೆ ಮನುನ್ ಮಾಜೊ ಉದ್ದೆಸ್ ನ್ಹಯ್ ತುಮಿ ಬರ್‍ಯಾ ರಿತಿನ್ ಚಲುನ್ ಕಸ್ಲಿಬಿ ಅಡ್ಕಳ್ ನಸ್ತಾನಾ ಧನಿಯಾಚಿ ಸೆವಾ ಕರುಚಿ ಮನುನ್ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:35
14 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ.


ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು.


ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.


ಆಗ್ಗೆ ಫರಿಸಾಯರು ಹೊರಟು ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸುವ ಎಂದು ಕೂಡಿ ಆಲೋಚಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು