1 ಕೊರಿಂಥದವರಿಗೆ 7:36 - ಕನ್ನಡ ಸತ್ಯವೇದವು J.V. (BSI)36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ, ಆಕೆಗೆ ಪ್ರಾಯ ಕಳೆದು ಹೋಗುತ್ತಿದ್ದರೆ, ಮದುವೆಯಾಗುವುದು ಅವಶ್ಯವೆಂದು ಅವನಿಗೆ ಕಂಡರೆ, ತನ್ನಿಷ್ಟದಂತೆ ಮಾಡಲಿ. ಇದರಿಂದ ಅವನು ಪಾಪಮಾಡುವುದಿಲ್ಲ, ಮದುವೆ ಮಾಡಿಕೊಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಕೊನ್ ತರ್ ಎಕ್ಲೊ ಗೊಸ್ಟ್ ಹೊಲ್ಲ್ಯಾ ಚೆಡ್ವಾಚ್ಯಾ ವಿಶಯಾತ್ ಅಪ್ನಿ ಕರುಕ್ ಲಾಗ್ಲಾ ತೆ ಸಮಾ ನ್ಹಯ್ ಮನುನ್ ಚಿಂತ್ತಾ, ಖರೆ ತಿಚೆ ವೈರುಚ್ ಲೈ ಮನ್ ರಾಲ್ಯಾರ್ ತೊ ಅಪ್ನಾಕ್ ಕಾಯ್ ಬರೆ ದಿಸ್ತಾ ತೆ ಕರುಂದಿತ್, ತೆನಿ ಲಗಿನ್ ಕರುನ್ ಘೆತಲ್ಯಾತ್ ಕಾಯ್ಬಿ ಚುಕ್ ನಾ. ಅಧ್ಯಾಯವನ್ನು ನೋಡಿ |