Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:37 - ಕನ್ನಡ ಸತ್ಯವೇದವು J.V. (BSI)

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖರೆ ಜೊ ಕೊನ್ ಕಸ್ಲಿಬಿ ಜಬರ್ದಸ್ತಿ ನಸ್ತಾನಾ ಅಪ್ನಾಚ್ಯಾ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ತ್ಯಾ ಚೆಡ್ವಾಕ್ ತಿ ಕಶಿ ಹಾಯ್ ತ್ಯಾಚ್ ಸ್ಥಿತಿರ್ ಥವ್ಕ್ ಮನ್ ಕರ್‍ತಾ ಹೊಲ್ಯಾರ್, ತೊಬಿ ಬರೆಚ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:37
6 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ.


ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೇದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.


ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ದಾನಿಯೇಲನು ತಾನು ರಾಜನ ಭೋಜನಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ - ನಾನು ಅಶುದ್ಧನಾಗಲಾರೆ, ಕ್ಷವಿುಸು ಎಂದು ವಿಜ್ಞಾಪಿಸಿದಾಗ


ನೀವು ಬರೆದ ಸಂಗತಿಗಳನ್ನು ಕುರಿತು ನಾನು ಹೇಳುವ ಅಭಿಪ್ರಾಯವೇನಂದರೆ - ಸ್ತ್ರೀಸಂಪರ್ಕವಿಲ್ಲದೆ ಇರುವದು ಮನುಷ್ಯನಿಗೆ ಒಳ್ಳೇದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು