Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:7 - ಕನ್ನಡ ಸತ್ಯವೇದವು J.V. (BSI)

7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂದು ನನ್ನ ಇಷ್ಟ; ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲ್ಲರೂ ನಾನಿರುವಂತೆ ಇರಬೇಕೆಂಬುದು ನನ್ನ ಅಭಿಲಾಷೆ. ಆದರೆ ದೇವರು ಪ್ರತಿಯೊಬ್ಬನಿಗೂ ವಿಶಿಷ್ಟ ವರವನ್ನು ದಯಪಾಲಿಸಿದ್ದಾರೆ. ಒಬ್ಬನಿಗೆ ಒಂದು ವರವಾದರೆ, ಮತ್ತೊಬ್ಬನಿಗೆ ಇನ್ನೊಂದು ವರವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ತುಮಿಬಿ ಮಾಜ್ಯಾ ಸರ್ಕೆಚ್ ರ್‍ಹಾಲ್ಯಾರ್ ಹೊಯ್ ಹೊತ್ತೆ ಮನ್ತಲಿ, ಆಶ್ಯಾ!; ಖರೆ ದೆವಾನ್ ಹರಿ ಎಕ್ಲ್ಯಾಕ್ ದುಸ್ರಿ, ದುಸ್ರಿ ದೆನ್ಗಿಯಾ ದಿಲ್ಯಾನಾಯ್, ಎಕ್ಲ್ಯಾಕ್ ಎಕ್ ಥರಿಚೆ ಅನಿಎಕ್ಲ್ಯಾಕ್ ಅನಿ ಎಕ್ ಥರಿಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:7
9 ತಿಳಿವುಗಳ ಹೋಲಿಕೆ  

ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ.


ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು, ದೇವರಾತ್ಮನು ಒಬ್ಬನೇ;


ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇನಂದರೆ - ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;


ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.


ಅದಕ್ಕೆ ಲಾಬಾನನು - ಒಳ್ಳೇದು, ನೀನು ಹೇಳಿದಂತೆಯೇ ಆಗಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು