Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:9 - ಕನ್ನಡ ಸತ್ಯವೇದವು J.V. (BSI)

9 ಅವರು ದಮೆಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ; ಕಾಮತಾಪ ಪಡುವದಕ್ಕಿಂತ ಮದುವೆಮಾಡಿಕೊಳ್ಳುವದು ಉತ್ತಮವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರಿಗೆ ಸಂಯಮ ಇಲ್ಲದಿದ್ದರೆ ಮದುವೆಮಾಡಿಕೊಳ್ಳಲಿ. ಕಾಮತಾಪದಿಂದ ಬೆಂದುಹೋಗುವುದಕ್ಕಿಂತ ಮದುವೆಮಾಡಿಕೊಳ್ಳುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತೆಂಕಾ ಸ್ವನಿಯಂತ್ರನ್ ನಾಹೊಲ್ಯಾರ್, ತೆನಿ ಲಗಿನ್ ಹೊಂವ್ದಿತ್! ಕಶ್ಯಾಕ್ ಮಟ್ಲ್ಯಾರ್, ಆಂಗಾಚ್ಯಾ ವೊಡ್ನಿಚ್ಯಾ ಆಗಿತ್ ಜಳ್ತಲ್ಯಾನ್ಕಿ ತೆನಿ ಲಗಿನ್ ಹೊಲ್ಲೆಚ್ ಲೈ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:9
8 ತಿಳಿವುಗಳ ಹೋಲಿಕೆ  

ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ಮದಿಸಿ ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.


ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.


ಮುತ್ತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳುವದಕ್ಕೆ ಸ್ವತಂತ್ರಳಾಗಿದ್ದಾಳೆ.


ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದು ಹೋಗುತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ. ಅವನು ಪಾಪಮಾಡುವದಿಲ್ಲ, ಮದುವೆ ಮಾಡಿಕೊಡಲಿ.


ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.


ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡದೆ ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು