1 ಕೊರಿಂಥದವರಿಗೆ 8:1 - ಕನ್ನಡ ಸತ್ಯವೇದವು J.V. (BSI)1 ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅನಿ ಅತ್ತಾ ಮುರ್ತಿಯಾಕ್ನಿ ಭೆಟ್ವಲ್ಲ್ಯಾ ಖಾನ್ಯಾಚ್ಯಾ ವಿಶಯಾತ್ ತುಮಿ ಸಾಂಗ್ತ್ಯಾಶಿ ತಸೆಚ್ ಅಮ್ಕಾ ಸಗ್ಳೆ ಶಾನ್‍ಪಾನ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್ ಖರೆ ಶಾನ್‍ಪಾನ್ ಅಮ್ಕಾ ಹಂಕಾರಿ ಕರ್‍ತಾ, ಪ್ರೆಮ್ ಎವ್ಡೊಚ್ ಅಮ್ಕಾ ವಾಡಾವಳ್ ದಿತಾ. ಅಧ್ಯಾಯವನ್ನು ನೋಡಿ |
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.