Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:10 - ಕನ್ನಡ ಸತ್ಯವೇದವು J.V. (BSI)

10 ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೈಜ ಅರಿವುಳ್ಳವನೆಂದು ಹೇಳಿಕೊಳ್ಳುವ ನೀನು ವಿಗ್ರಹದ ಗುಡಿಯಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲ ಮನಸ್ಸಾಕ್ಷಿಯುಳ್ಳ ಸೋದರನು ಕಂಡರೆ, ಅವನು ಸಹ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಲು ಧೈರ್ಯಗೊಳ್ಳಲಾರನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಲ್ಲಾ ತಿಳುವಳಿಕೆಯಿರುವ ನೀನು ವಿಗ್ರಹದ ಗುಡಿಯಲ್ಲಿ ತಿನ್ನುವುದನ್ನು ನೋಡಿದರೆ ಬಲಹೀನ ಮನಸ್ಸಾಕ್ಷಿಯುಳ್ಳ ಸಹೋದರನು, ತಾನೂ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನು ತಿನ್ನುವುದಕ್ಕೆ ಧೈರ್ಯಗೊಳ್ಳುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕೊನ್‍ಬಿ ಎಕ್ಲೊ ತುಕಾ ವಳ್ಕಿಚ್ಯಾ ಮಾನ್ಸಾಕ್ ಮುರ್ತಿ ಭೆಟ್ಟುನ್ ದಿಲ್ಲ್ಯಾ ಗುಡಿತ್ ಜೆವ್ನಾಕ್ ಬಸಲ್ಲೆ ಬಗ್ತಾ ಮನುನ್ ಚಿಂತುವಾ, ತೆಚೊ ಭುತ್ತುರ್‍ಲೊ ಮನ್ ಘಟ್ ನಸ್ಲ್ಯಾರ್ ತುಕಾ ಬಗುನ್ ಮುರ್ತಿ ಭೆಟ್ವಲ್ಲೆ ಖಾನ್ ಖಾವ್ಕ್ ತೆಕಾಬಿ ಧೈರೊ ಗಾವ್ತಾ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:10
13 ತಿಳಿವುಗಳ ಹೋಲಿಕೆ  

ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು