Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:12 - ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಸಹೋದರರಿಗೆ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ಪಾಪಮಾಡುವವರಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ತುಜ್ಯಾ ಭಾವ್ ಭೆನಿಚ್ಯಾ ವಿರೊದ್ ತಿಯಾ ಪಾಪ್ ಕರ್‍ತಾನಾ ಅನಿ ತೆಚ್ಯಾ ಘಟ್ ನಸಲ್ಲ್ಯಾ ಭುತ್ತುರ್ಲ್ಯಾ ಮನಾಕ್ ಲುಕ್ಷಾನಾತ್ ಘಾಲ್ತಾನಾ, ತಿಯಾ ಕ್ರಿಸ್ತಾಚ್ಯಾ ವಿರೊದುಚ್ ಪಾಪ್ ಕರ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:12
18 ತಿಳಿವುಗಳ ಹೋಲಿಕೆ  

ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.


ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು