1 ಕೊರಿಂಥದವರಿಗೆ 8:6 - ಕನ್ನಡ ಸತ್ಯವೇದವು J.V. (BSI)6 ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜಾಲ್ಯಾರ್‌ಬಿ ಅಮ್ಕಾ ಎಕುಚ್ ದೆವ್ ಹಾಯ್, ತೊ ಬಾಬಾ ಸಗ್ಳಿ ಜಿನ್ಸಾ ತೆಚ್ಯಾ ವೈನಾಚ್ ಯೆಲ್ಯಾತ್ ಅನಿ ತೆಚೆಸಾಟ್ನಿ ಅಮಿ ಜಿವನ್ ಕರ್ತಾಂವ್ ಅನಿ ಅಮ್ಕಾ ಎಕ್ಲೊಚ್ ಧನಿ, ಜೆಜು ಕ್ರಿಸ್ತ್; ತೆಚ್ಯಾ ವೈನಾ ಸಗ್ಳಿ ಸಾಮಾನಾ ರಚುನ್ ಹೊಲ್ಯಾತ್ ಅನಿ ತೆಚ್ಯಾ ವೈನಾಚ್ ಅಮಿ ಜಿವನ್ ಕರ್ತಾಂವ್. ಅಧ್ಯಾಯವನ್ನು ನೋಡಿ |