Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:8 - ಕನ್ನಡ ಸತ್ಯವೇದವು J.V. (BSI)

8 ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ತಿನ್ನುವ ಆಹಾರ ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾರದು. ಅದನ್ನು ತಿನ್ನದಿರುವುದರಿಂದ ನಮಗೆ ನಷ್ಟವಿಲ್ಲ, ತಿಂದರೆ ಲಾಭವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖಾನಾಚ್ಯಾ ವೈನಾ ಅಮಿ ದೆವಾಕ್ ಪಸಂದ್ ಅಸಲ್ಲೆ ಹೊಯ್ನಾವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ನಸಲ್ಲ್ಯಾ ವೈನಾ ಅಮ್ಕಾ ಕಾಯ್ಬಿ ಲುಕ್ಷಾನ್ ನಾ ಅನಿ ಖಾಲ್ಲ್ಯಾ ವೈನಾ ಕಾಯ್ ಫಾಯ್ದೊಬಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:8
5 ತಿಳಿವುಗಳ ಹೋಲಿಕೆ  

ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.


ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು