Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:1 - ಕನ್ನಡ ಸತ್ಯವೇದವು J.V. (BSI)

1 ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಎಕ್‍ ಸ್ವತಂತ್ರ್ ಮಾನುಸ್ ನ್ಹಯ್ ಕಾಯ್? ಮಿಯಾ ಎಕ್ ಅಪೊಸ್ತಲ್ ನ್ಹಯ್ ಕಾಯ್? ಅಮ್ಚ್ಯಾ ಧನಿಯಾ ಜೆಜುಕ್ ಮಿಯಾ ಬಗುಕ್ ನಾ ಕಾಯ್? ಧನಿಯಾಸಾಟ್ನಿ ಮಿಯಾ ಕರಲ್ಲ್ಯಾ ಕಾಮಾಚೆ ಫಳ್ ತುಮಿ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:1
37 ತಿಳಿವುಗಳ ಹೋಲಿಕೆ  

ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು.


ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು.


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ.


ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ


ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ -


ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.


ಅದು ನಿನ್ನ ಮನಸ್ಸಿನ ಸಂಶಯವಲ್ಲ, ತಿಳಿಸಿದವನ ಮನಸ್ಸಿನಲ್ಲಿರುವ ಸಂಶಯವೇ. ಮತ್ತೊಬ್ಬನ ಮನಸ್ಸಿನಲ್ಲಿರುವ ಸಂಶಯದಿಂದ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?


ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿವಿುತ್ತ ನನಗೆ ಯಾಕೆ ದೂಷಣೆಯಾಗಬೇಕು?


ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು