Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:10 - ಕನ್ನಡ ಸತ್ಯವೇದವು J.V. (BSI)

10 ದೇವರು ಚಿಂತಿಸುವದು ಎತ್ತುಗಳಿಗಾಗಿಯೋ? ಅಥವಾ ನಮಗೋಸ್ಕರವಾಗಿಯೇ ಹೇಳುತ್ತಾನೋ? ಹೌದು, ನಮಗೋಸ್ಕರ ಬರೆದದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುತ್ತದೆಂದು ಉಳುವದೂ, ಒಕ್ಕುವವನು ತನಗೆ ಪಾಲು ದೊರಕುತ್ತದೆಂದು ಒಕ್ಕುವದೂ ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಸಂಶೆವ್ ನಸ್ತಾನಾ ಅಮ್ಚೆಸಾಟ್ನಿ ತೆನಿ ಅಶೆ ಮಟ್ಲ್ಯಾನಾಯ್ ಹೊಯ್‍ಕಿ ನ್ಹಯ್? ಹೊಯ್, ಹೆ ಖರೆಬಿ ಅಮ್ಚ್ಯಾಸಾಟ್ನಿ ಲಿವಲ್ಲೆ ಹಾಯ್, ಕಶ್ಯಾಕ್ ಮಟ್ಲ್ಯಾರ್ ಜೊ ಕೊನ್ ನಾಂಗರ್‍ತಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ನಾಂಗ್ರುಚೆ ಅನಿ ಜೆ ಕೊನ್ ಮಳ್ತಾನಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ಮಳುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:10
9 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ನೀವೂ ನಿಮ್ಮ ಮನೆಗಳವರೂ ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು