Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:17 - ಕನ್ನಡ ಸತ್ಯವೇದವು J.V. (BSI)

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜ್ಯಾ ಸ್ವಂತ್ ಖುಶಿನ್ ಮಿಯಾ ಹೆ ಕಾಮ್ ಕರ್‍ತಾ ಹೊಲ್ಯಾರ್ ಮಾಕಾ ಕಾಯ್ಬಿ ಗಾವ್ತಾ ಮನುನ್ ಆಶಾ ಕರುಕ್ ಹೊಯ್ ಹೊತ್ತೆ, ಖರೆ ಮಿಯಾ ತೆ ಎಕ್ ಕರ್ತವ್ಯ್ ಮನುನ್ ಕರ್ತಾ, ಮಾಕಾ ದೆವಾನ್ ದಿಲ್ಲೆ ಕಾಮ್ ಹೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:17
30 ತಿಳಿವುಗಳ ಹೋಲಿಕೆ  

ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.


ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಸಂಬಳ ಬರುವದು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.


ಮತ್ತು ಸ್ವೇಚ್ಫೆಯಿಂದ ಯೆರೂಸಲೇವಿುನಲ್ಲಿ ವಾಸಿಸುವದಕ್ಕೆ ಮನಸ್ಸುಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಈ ಬೆಳ್ಳಿ ಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಮಾನುಗಳನ್ನು ಮಾಡಿಸಬೇಕು. ಈಹೊತ್ತು ಉದಾರ ಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವದಕ್ಕೆ ಯಾರು ಮನಸ್ಸುಳ್ಳವರಾಗಿದ್ದಾರೆ ಎಂದು ನೆರೆದ ಸಭೆಗೆ ಹೇಳಲು


ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಹಾಗಾದರೆ ನನಗಾಗುವ ಬಹುಮಾನವೇನು? ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನ ಮಾಡುವ ಹಕ್ಕನ್ನು ನಡಿಸದೆ ಅದನ್ನು ಉಚಿತಾರ್ಥವಾಗಿ ದಾನಮಾಡುವದೇ ನನಗೆ ಬಹುಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು