Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:19 - ಕನ್ನಡ ಸತ್ಯವೇದವು J.V. (BSI)

19 ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಕೊನಾಚೊಬಿ ಗುಲಾಮ್ ನ್ಹಯ್ ಜಾಲ್ಯಾರ್‌ಬಿ ಹೊತಾ ತವ್ಡ್ಯಾ ಮಾನ್ಸಾಕ್ನಿ ಕಮ್ವುನ್ ಘೆವ್‍ಸಾಟ್ನಿ ಮಿಯಾ ಸಗ್ಳ್ಯಾಂಚೊ ಗುಲಾಮ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:19
21 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ.


ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಅದು ನಿನ್ನ ಮನಸ್ಸಿನ ಸಂಶಯವಲ್ಲ, ತಿಳಿಸಿದವನ ಮನಸ್ಸಿನಲ್ಲಿರುವ ಸಂಶಯವೇ. ಮತ್ತೊಬ್ಬನ ಮನಸ್ಸಿನಲ್ಲಿರುವ ಸಂಶಯದಿಂದ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು