Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:21 - ಕನ್ನಡ ಸತ್ಯವೇದವು J.V. (BSI)

21 ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖಾಯ್ದ್ಯಾಂಚ್ಯಾ ಖಾಯ್ಲ್ ನಸಲ್ಲ್ಯಾಕ್ನಿ ಕಮ್ವುನ್ ಘೆವಸಾಟ್ನಿ ಖಾಯ್ದ್ಯಾಂಚ್ಯಾ ಖಾಯ್ಲ್ ನಸಲ್ಲ್ಯಾಂಚ್ಯಾ ಸಾರ್ಕೆ ಮಿಯಾ ಹೊಲೊ, ತಸೆ ಮಟ್ಲ್ಯಾರ್ ದೆವಾಚೆ ಖಾಯ್ದೆ ನಸ್ತಾನಾ ಮಿಯಾ ಹಾಂವ್ ಮನುನ್ ನ್ಹಯ್, ಖರೆಚ್ ಮಿಯಾ ಕ್ರಿಸ್ತಾಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:21
22 ತಿಳಿವುಗಳ ಹೋಲಿಕೆ  

ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು.


ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು