Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:22 - ಕನ್ನಡ ಸತ್ಯವೇದವು J.V. (BSI)

22 ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಬಳ್ ನಸಲ್ಲ್ಯಾಕ್ನಿ ಕಮ್ವುನ್ ಘೆವಸಾಟ್ನಿ ಬಳ್ ನತ್ತ್ಯಾಂಚ್ಯಾ ಮದ್ದಿ ಮಿಯಾ ಬಳ್ ನಸಲ್ಲೊ ಹೊಲೊ. ಕಸೆ ತರ್ಬಿ ಕರುನ್ ಉಲ್ಲ್ಯಾಸ್ಯಾಕ್ನಿ ಹುರ್ವುನ್ ಘೆವಸಾಟ್ನಿ ಕೊನಾ ಕೊನಾಕ್ ಕಾಯ್ ಕಾಯ್ ಹೊವ್ಚೆ ತೆ ಮಿಯಾ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:22
12 ತಿಳಿವುಗಳ ಹೋಲಿಕೆ  

ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.


ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?


ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು