Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:23 - ಕನ್ನಡ ಸತ್ಯವೇದವು J.V. (BSI)

23 ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೆ ಸಗ್ಳೆ ಬರ್‍ಯಾ ಖಬ್ರೆಸಾಟ್ನಿ ಮಿಯಾ ಕರ್‍ತಾ; ಕಶ್ಯಾಕ್ ಮಟ್ಲ್ಯಾರ್ ಮಾಕಾಬಿ ತ್ಯಾತುರ್ ವಾಟೊ ಗಾವುಚೊ ಮನುನ್ ಮಾಜೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:23
14 ತಿಳಿವುಗಳ ಹೋಲಿಕೆ  

ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.


ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.


ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು