Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:24 - ಕನ್ನಡ ಸತ್ಯವೇದವು J.V. (BSI)

24 ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕ್ ಖೆಳಾಚ್ಯಾ ಜಾಗ್ಯಾರ್ ಪಳುಕ್ ಹೊತಲೆ ಸಗ್ಳೆ ಜಾನಾ ಪಳ್ತಾತ್ ತೆ ಖರೆ, ತ್ಯಾತುರ್ ಎಕ್ಲ್ಯಾಕ್ ತವ್ಡೆಚ್ ಭೊಮಾನ್ ಗಾವ್ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? ತರ್ ಭೊಮಾನ್ ಗಾಯ್ ಸಾರ್ಕೆ ತುಮಿಬಿ ಪಳಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:24
18 ತಿಳಿವುಗಳ ಹೋಲಿಕೆ  

ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದಿರುವ ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದವನಾಗಿ ಗುದ್ದಾಡುತ್ತೇನೆ.


ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು?


[ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟು ಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವದಕ್ಕೆ ಉಲ್ಲಾಸಗೊಂಡಿದ್ದಾನೆ.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?


ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು