Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:11 - ಕನ್ನಡ ಸತ್ಯವೇದವು J.V. (BSI)

11 ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಹಿಮೆಚಿ ಅನಿ ಭಾಗೆವಂತ್ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ತಲೆ ಶಿಕಾಪ್ ಮಾಕಾ ಬರ್‍ಯಾ ಖಬ್ರೆತ್ ಗಾವ್ಲೆ ಅನಿ ತ್ಯಾ ಬರ್‍ಯಾ ಖಬ್ರೆನ್ ಮಾಕಾ ಉರ್ಬಾ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:11
25 ತಿಳಿವುಗಳ ಹೋಲಿಕೆ  

ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನಿನ್ನ ವಶಕ್ಕೆ ಕೊಡಲ್ಪಟ್ಟಿರುವದನ್ನು ಶ್ರೇಷ್ಠವೆಂದು ತಿಳಿದು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಕಾಪಾಡು.


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು