Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:14 - ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಧನಿಯಾನ್ ಅಪ್ನಾಚಿ ಮೊಟಿ ಕುರ್ಪಾ ಮಾಜೆ ವರ್‍ತಿ ವೊತ್ಲ್ಯಾನ್ ಅನಿ ಮಾಕಾ ವಿಶ್ವಾಸಾನ್ ಭರ್ಲ್ಯಾನ್ ಅನಿ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಕರ್‍ತಲೊ ಪ್ರೆಮ್ ಮಾಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:14
25 ತಿಳಿವುಗಳ ಹೋಲಿಕೆ  

ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್.


ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು.


ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ


ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು