Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:17 - ಕನ್ನಡ ಸತ್ಯವೇದವು J.V. (BSI)

17 ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅತ್ತಾ ತ್ಯಾ ನಿರಂತರ್ ರಾಜ್ವಟ್ ಕರ್ತಲ್ಯಾ ರಾಜಾಕ್, ಕನ್ನಾಚ್ ನಾಸ್ ಹೊಯ್ನಸಲ್ಲ್ಯಾ ಅನಿ ದಿಸ್ಟಿಕ್ ದಿಸಿನಸಲ್ಲ್ಯಾ ಎಕ್ಲ್ಯಾಚ್ ದೆವಾಕ್ ಮಹಿಮಾ ಅನಿ ಮಾನ್ ಹೊಂವ್ದಿತ್ ಸದಾ ಸರ್ವತಾಕ್ ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:17
48 ತಿಳಿವುಗಳ ಹೋಲಿಕೆ  

ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಆತನಿಗೆ ಆಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು