Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:19 - ಕನ್ನಡ ಸತ್ಯವೇದವು J.V. (BSI)

19 ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ತುಜೊ ವಿಶ್ವಾಸ್ ಅನಿ ಖಾತ್ರಿ ಘಟ್ ರ್‍ಹಾಂವ್ದಿತ್. ಉಲ್ಲ್ಯಾ ಲೊಕಾನಿ ಅಪ್ನಾಚ್ಯಾ ಬರ್‍ಯಾ ಭುತ್ತುರ್‍ಲ್ಯಾ ಮನಾನ್ ಸಾಂಗಲ್ಲೆ ಆಯ್ಕಿನಸ್ತಾನಾ ಅಪ್ನಾಚೊ ವಿಶ್ವಾಸ್ ಹಾಳ್ ಕರುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:19
25 ತಿಳಿವುಗಳ ಹೋಲಿಕೆ  

ಮದ್ಯನಿರತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿದವರಿಗೆ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ನಿನ್ನ ಕೃತ್ಯಗಳನ್ನು ಬಲ್ಲೆನು; ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನಗೆ ಸೇರಿದವನಲ್ಲವೆಂದು ಹೇಳದೆ ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ, ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ; ಯಾರೂ ಅದನ್ನು ಮುಚ್ಚಲಾರರು.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು