Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:20 - ಕನ್ನಡ ಸತ್ಯವೇದವು J.V. (BSI)

20 ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲ್ಯಾ ಹೆಮೆನ್ಯುಸ್ ಅನಿ ಅಲೆಗ್ಸಾಂಡರ್ ಮನ್ತಲ್ಯಾಕ್ಬಿ, ತೆನಿ ದೆವಾಚಿ ನಿಂದ್ಯಾ ಕರುಚೆ ನ್ಹಯ್ ಮನುನ್ ತೆಂಕಾ ಬುದ್ದ್ ಶಿಕ್ವುಕ್ ಮನುನ್ ಸೈತಾನಾಚ್ಯಾ ಹಾತಿತ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:20
17 ತಿಳಿವುಗಳ ಹೋಲಿಕೆ  

ಅವರ ಮಾತು ಕೊಳಕು ಹುಣ್ಣಿನಂತೆ ಹರಡಿಕೊಳ್ಳುವದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.


ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು