Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:5 - ಕನ್ನಡ ಸತ್ಯವೇದವು J.V. (BSI)

5 ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಕರಾರಾಚ್ಯಾ ನೆಮಾಚೊ ಉದ್ದೆಶ್ ಪ್ರೆಮ್ ಹೊವ್ನ್ ಹಾಯ್. ಹೆ, ಎಕ್ ಪವಿತ್ರ್ ಭುತ್ತುರ್‍ಲ್ಯಾ ಮನಾಕ್, ಬರಿ ಬುದ್ದ್ ಅನಿ ವಿಶ್ವಾಸ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:5
43 ತಿಳಿವುಗಳ ಹೋಲಿಕೆ  

ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರಸ್ನೇಹವನ್ನೂ ಸಹೋದರಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.


ಮದ್ಯನಿರತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿದವರಿಗೆ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.


ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.


ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು