Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:15 - ಕನ್ನಡ ಸತ್ಯವೇದವು J.V. (BSI)

15 ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಕಾಸ್ಮಾತ್ ಮಿಯಾ ಯೆವ್ಕ್ ಎಳ್ ಹೊಲ್ಯಾರ್ಬಿ ದೆವಾಚ್ಯಾ ಸಂಸಾರಾತ್ ತೆ ಝಿತ್ತ್ಯಾ ದೆವಾಚೊ ಲೊಕಾಂಚೊ ತಾಂಡೊ ಹೊವ್ನ್ ಅಸಲ್ಲ್ಯಾ ಘರಾಕ್ ಎಕ್ ಖಾಂಬೊ ಅನಿ ಖರ್‍ಯಾಚೊ ಆದಾರ್ ಕಸೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಚಿಟಿ ತುಕಾ ಕಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:15
55 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರಿಗೆ ಕೊಟ್ಟ ವಿಧಿ ನ್ಯಾಯಗಳನ್ನು ನೀನು ಕೈಕೊಳ್ಳುವದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು; ಅಂಜಬೇಡ, ಕಳವಳಗೊಳ್ಳಬೇಡ.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಮತ್ತು ಯಾವ ಸ್ಥಳದಲ್ಲಿ - ನೀವು ನನ್ನ ಜನರಲ್ಲವೆಂದು ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ಜೀವವುಳ್ಳ ದೇವರ ಪುತ್ರರು ಎನಿಸಿಕೊಳ್ಳುವರು ಎಂಬದು.


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀವು ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಅವುಗಳಲ್ಲಿ ಕೆಲವು ಉತ್ತಮವಾದ ಬಳಕೆಗೂ ಕೆಲವು ಹೀನವಾದ ಬಳಕೆಗೂ ಬರುತ್ತವೆ.


ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?


ಸತ್ಯವಾಕ್ಯ ದೇವರ ಮಹತ್ವ ಇವುಗಳಿಂದ ಕೂಡಿದವರಾಗಿದ್ದೇವೆ. ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡವರೂ


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಬೇಗನೆ ನಿನ್ನ ಬಳಿಗೆ ಬರುವೆನೆಂದು ನನಗೆ ನಿರೀಕ್ಷೆಯುಂಟು;


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ದೇವರ ಮನೆಯ ಮೇಲೆ ಅಧಿಕಾರಿಯಾಗಿರುವ ಶ್ರೇಷ್ಠನಾದ ಯಾಜಕನು ನಮಗಿದ್ದಾನೆ.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು