Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:6 - ಕನ್ನಡ ಸತ್ಯವೇದವು J.V. (BSI)

6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕ್ರಿಸ್ತಾಂವ್ ವಿಶ್ವಾಸಾತ್ ಜಾನ್ತೊ ಹೊಲ್ಲೊ ಅನ್‍ಬೊಗ್ ಹೊತ್ತೊ ಮಾನುಸ್ ರ್‍ಹಾವ್ಚೊ, ಅಶೆ ಗಿರೊ ಸರ್ಕೆ ಗರುಕಿ ಕರುನ್ ತೆನಿ ಚುಕೆತ್ ಪಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:6
24 ತಿಳಿವುಗಳ ಹೋಲಿಕೆ  

ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಸಹೋದರರೇ, ನಾನಂತೂ ದೇವರಾತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಲಾರದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಬೇಕಾಯಿತು.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.


ಹೀಗಾದರೆ ಅವನೂ ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ ಇಸ್ರಾಯೇಲ್ಯರ ನಡುವೆ ಬಾಳುವರು.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ


ಆತನು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು