Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:13 - ಕನ್ನಡ ಸತ್ಯವೇದವು J.V. (BSI)

13 ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಯೆಯ್ ಪತರ್, ಲೊಕಾಕ್ನಿ ದೆವಾಚ್ಯಾ ಗೊಸ್ಟಿಯಾ ತೆಂಕಾ ಶಿಕಾಪ್ ಕರ್ ಅನಿ ವಾಚ್ವುನ್, ಅನಿ ಸೊಡ್ಸುನ್ ಸಾಂಗುನ್ಗೆತ್ ರ್‍ಹಾತಲ್ಯಾಕ್ ತುಜೊ ಎಳ್ ಖರ್ಚುಂಗೆತ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:13
20 ತಿಳಿವುಗಳ ಹೋಲಿಕೆ  

ನಾವಾದರೋ ಪ್ರಾರ್ಥನೆಯನ್ನೂ ವಾಕ್ಯೋಪದೇಶವನ್ನೂ ಮಾಡುವದರಲ್ಲಿ ನಿರತರಾಗಿರುವೆವು ಎಂದು ಹೇಳಿದರು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ಅವನು ಮದದಿಂದ ತನ್ನ ಸ್ವದೇಶದವರನ್ನು ಹಿಯ್ಯಾಳಿಸದೆ ಯೆಹೋವನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳದೆ ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಈ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸುವದಕ್ಕೆ ಅಭ್ಯಾಸ ಮಾಡಿಕೊಳ್ಳುವಂತೆ ಈ ಗ್ರಂಥವು ಅವನ ಬಳಿಯಲ್ಲೇ ಇರಬೇಕು; ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದರಲ್ಲಿ ಓದಿಕೊಳ್ಳುತ್ತಾ ಇರಬೇಕು.


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು