1 ತಿಮೊಥೆಯನಿಗೆ 4:3 - ಕನ್ನಡ ಸತ್ಯವೇದವು J.V. (BSI)3 ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹಿ ಲೊಕಾ ಲಗಿನ್ ಕರುನ್ ಘೆತಲೆ ಅನಿ ಉಲ್ಲಿ ಖಾತಲಿ ದಿನ್ಸಾ ಖಾವ್ಚೆ ನ್ಹಯ್ ಮನುನ್ ಶಿಕ್ವುತಾತ್, ಖರೆಪಾನ್ ಒಳ್ಕುನ್ ಘೆಟಲ್ಲ್ಯಾನಿ ಅನಿ ಅಪ್ನಾ ವರ್‍ತಿ ವಿಶ್ವಾಸ್ ಥವಲ್ಲ್ಯಾನಿ ಎಕ್ ಧನ್ಯವಾದಾಚಿ ಮಾಗ್ನಿ ಸಾಂಗುನ್ ಖಾವ್ಕ್ ಮನುನುಚ್ ದೆವಾನ್ ತಿ ಖಾತಲಿ ದಿನ್ಸಾ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿ |