1 ತಿಮೊಥೆಯನಿಗೆ 4:6 - ಕನ್ನಡ ಸತ್ಯವೇದವು J.V. (BSI)6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ದೆವಾಚ್ಯಾ ಗೊಸ್ಟಿಯಾಂಚ್ಯಾ ವಿಶ್ವಾಸಾನ್ ಅನಿ ಖರ್ಯಾಪಾನಾಚ್ಯಾ ಸಿಕಾಪಾ ಸರ್ಕೆ ಚಲುನ್, ಕಶೆ ತಿಯಾ ದೆವಾಚ್ಯಾ ವಾಟೆರ್ ಚಲ್ತೆ ತಸೆ ದೆವಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಭಾವ್ ಭೆನಿಯಾಕ್ನಿ ಹ್ಯಾ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಸಿಕ್ವುಲೆ ತರ್ ತಿಯಾ ಜೆಜು ಕ್ರಿಸ್ತಾಚೊ ಬರೊ ಸೆವಕ್ ಹೊತೆ. ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.
ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ.