Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:10 - ಕನ್ನಡ ಸತ್ಯವೇದವು J.V. (BSI)

10 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿ ಬರಿ ಕಾಮಾ ಕರಲ್ಲಿ ರ್‍ಹಾವ್ಚಿ ಅನಿ ತಿ ಪೊರಾಕ್ನಿ ಬಾಳ್ಗುನ್ ಮೊಟಿ ಕರಲ್ಲಿ, ಸೈಯ್ರ್ಯಾಕ್ನಿ ಬರೆ ಕರುನ್ ಬಗಲ್ಲಿ, ದುಸ್ರ್ಯಾಂಚಿ ಸೆವಾ ಕರಲ್ಲಿ, ದುಸ್ರ್ಯಾ ವಿಶ್ವಾಸಾತ್ ಹೊತ್ಯಾಕ್ನಿ ಮಜತ್ ಕರಲ್ಲಿ, ಅನಿ ಬರೆ ಕರ್‍ತಲ್ಯಾ ಕಾಮಾಸಾಟಿ ಅಪ್ನಾಕುಚ್ ಸೊಡುನ್ ದಿಲ್ಲಿ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:10
42 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಸಕಲಸತ್ಕಾರ್ಯಗಳನ್ನು ಮಾಡುವದಕ್ಕೆ ಸಿದ್ಧರಾಗಿರಬೇಕೆಂತಲೂ,


ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ತ್ಯಾವಮಾಡಿ ತನ್ನ ತಲೆಯಕೂದಲಿನಿಂದ ಒರಸಿದಳು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.


ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರವಿುಸಿಕೊಳ್ಳಿರಿ.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.


ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳುಕೊಂಡ ಪರವಾಸಿಯೆಂದು ಉದ್ಧಾರಮಾಡಬೇಕು.


ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡಿದ್ದವರ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ತರಿಸಿದನು.


ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,


ನಂಬುವವಳಾದ ಸ್ತ್ರೀಯ ಅಧೀನದಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಸೇರಿಸಿ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ಕೊಡಿಸಿ ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು