1 ತಿಮೊಥೆಯನಿಗೆ 5:20 - ಕನ್ನಡ ಸತ್ಯವೇದವು J.V. (BSI)20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆ ಕೊನ್ ಪಾಪ್ ಕರ್‍ತಾತ್ ತೆಂಕಾ ಲೊಕಾತ್ನಿಚ್ ಜೊರ್ ಕರ್, ಅಶೆ ಅನಿ ಹುರಲ್ಲ್ಯಾ ಲೊಕಾಕ್ನಿಬಿ ಉಲ್ಲೆ ಭಿಂಯೆ ರ್‍ಹಾತಾ. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.