Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:21 - ಕನ್ನಡ ಸತ್ಯವೇದವು J.V. (BSI)

21 ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಅನಿ ಕ್ರಿಸ್ತ್ ಜೆಜುಚ್ಯಾ ಅನಿ ಪವಿತ್ರ್ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಮಿಯಾ ತುಕಾ ಹುಕುಮ್ ದಿತಾ. ತುಕಾ ದಿಲ್ಲ್ಯಾ ಗೊಸ್ಟಿಯಾ ಯಾದಿತ್ ಥವ್ನ್ ಘೆ, ಇಚಾರ್ ಕರಿನಸ್ತಾನಾ ಕೊನಾಚಿಬಿ ಚುಕ್ ಮನುನ್ ಸಾಂಗುನಕೊ ಅನಿ ಭೆದ್‍ಭಾವ್ ತರ್ ಬಿಲ್ಕುಲ್ ಕರುಕ್ ಜಾವ್‍ನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:21
25 ತಿಳಿವುಗಳ ಹೋಲಿಕೆ  

ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.


ಇವರು - ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು