Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:22 - ಕನ್ನಡ ಸತ್ಯವೇದವು J.V. (BSI)

22 ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಯಾಚ್ಯಾ ಕಾಮಾಸಾಟ್ನಿ ಮನುನ್ ಲೊಕಾಕ್ನಿ ತೆಂಚ್ಯಾ ಟಕ್ಲ್ಯಾ ವರ್‍ತಿ ಹಾತ್ ಥವ್ನ್ ಎಚುನ್ ಕಾಡ್ತಲ್ಯಾತ್ ಗಡ್ಬಡಿ ಕರುನಕೊ. ದುಸ್ರ್ಯಾಂಚ್ಯಾ ಪಾಪಾತ್ ತಿಯಾ ಭಾಗ್ ಘೆವ್‍ನಕೊ; ತುಕಾಚ್ ತಿಯಾ ಪವಿತ್ರ್ ರ್‍ಹಾಯ್ ಸರ್ಕೆ ಸಂಬಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:22
18 ತಿಳಿವುಗಳ ಹೋಲಿಕೆ  

ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನಡಿಸಲಿ.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.


ಅವನಿಗೆ ಶುಭವಾಗಲಿ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.


ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ ಆ ಇಬ್ಬರ ಮೇಲೆ ಹಸ್ತಾರ್ಪಣ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು