Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:23 - ಕನ್ನಡ ಸತ್ಯವೇದವು J.V. (BSI)

23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖಾಲಿ ಪಾನಿ ಎವ್ಡೆಚ್ ಫಿವ್‍ನಕೊ. ತುಜ್ಯಾ ಜಿರ್‍ವನಿಕ್ ಅನಿ ತನ್ನಾ-ತನ್ನಾ ಸಿಕ್ ಪಡ್ತಲ್ಯಾಕ್ ಉಲ್ಲೊ ಆದಾರ್ ಹೊವ್‍ಸಾಟ್ನಿ ಉಲ್ಲಿಸಿ ವಾಯ್ನ್ ಬಿ ಫಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:23
11 ತಿಳಿವುಗಳ ಹೋಲಿಕೆ  

ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ಆತನು ಉಂಟುಮಾಡಿದ್ದೆಲ್ಲವೂ ಒಳ್ಳೇದೇ; ದೇವರ ಸ್ತೋತ್ರಮಾಡಿ ತೆಗೆದುಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿಷಿದ್ಧವೆಂದು ಹೇಳತಕ್ಕದ್ದಲ್ಲ;


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು